ಧಾರವಾಡ: ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಈಗಾಗಲೇ 12 ದಿನ ಕಳೆದಿವೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿ ಎಂಟು ದಿನ ಕಳೆದಿದ್ದು, ಬ್ಯಾನರ್‌ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ಮುಂದುವರೆದಿದ್ದಾರೆ.
ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಬ್ಯಾನರ್‌ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ರಾರಾಜಿಸುತ್ತಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸುತ್ತ ಹಾಕಿರುವ ಬ್ಯಾನರ್‌ಗಳು ಇವಾಗಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿ ಮಂತ್ರಿ ಮಂಡಲವೂ ವಿಸ್ತರಣೆಯಾಗಿದೆ. ಆದರೂ ಬ್ಯಾನರ್‌ಗಳಲ್ಲಿ ಕರ್ನಾಟಕ ರಾಜ್ಯದ ಸಿಎಂ ಆಗಿ ಯಡಿಯೂರಪ್ಪನವರೇ ಮುಂದುವರೆದಿರುವುದು ವಿಪರ್ಯಾಸ.
Kshetra Samachara
05/08/2021 04:37 pm