ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ಸಾರ್ವಜನಿಕರ ಸೇವೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಜನರ ಸೇವೆ ಮಾಡುವಲ್ಲಿ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದು, ಬರುವ ಚುನಾವಣೆಯಲ್ಲಿ ಆಮ್ ಆದ್ಮಿಗೆ ಪಾರ್ಟಿಗೆ ಒಂದು ಅವಕಾಶ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕೆಂದು ಮಾಜಿ ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಎಚ್.ಡಿ.ಬಸವರಾಜ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಎಲ್ಲ 82 ವಾರ್ಡ್ ಗಳಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಅಭಿವೃದ್ಧಿಯ ದೂರದೃಷ್ಟಿಯನ್ನು ಇಟ್ಟುಕೊಂಡು ಚುನಾವಣೆ ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ. ಅಲ್ಲದೆ ಅವಳಿನಗರದಲ್ಲಿ ಅಧಿಕಾರರೂಢ ಬಿಜೆಪಿ ಸರ್ಕಾರ ಜನರಿಗೆ ಭಾರಿ ಅನ್ಯಾಯವನ್ನು ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು.
ಇನ್ನೂ ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಅವ್ಯವಸ್ಥೆಯಿಂದ ಸರ್ಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದರು.
Kshetra Samachara
06/08/2021 01:02 pm