ಧಾರವಾಡ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಸಂಪುಟದಲ್ಲಿ ಸಚಿವನಾಗಿ ನೇಮಕಗೊಂಡ ಪ್ರಯುಕ್ತ, ಶುಭಕೋರಲು ಬರುವ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಮುಖಂಡರು ಯಾರೂ ಕೂಡ ಹೂವಿನ ಹಾರ, ತುರಾಯಿಗಳು ಮತ್ತು ಇನ್ನಿತರ ನೆನಪಿನ ಕಾಣಿಕೆಗಳನ್ನು ತರಬಾರದೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ತಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವೇ ಅತ್ಯಮೂಲ್ಯ ಹಾರೈಕೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
Kshetra Samachara
06/08/2021 01:36 pm