ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಚಿವರಾಗಿರುವ ಬೆನ್ನಲ್ಲೇ ಮುನೇನಕೊಪ್ಪ ಅಭಿಮಾನಿಗಳಿಗೆ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಸಂತೋಷ ಚಿಗುರೊಡೆದಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಸಚಿವರಾಗಿ ಮೊದಲ ಬಾರಿಗೆ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
07/08/2021 12:49 pm