ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸನ್ಮಾನ ಮಾಡುವ ಭರದಲ್ಲಿ ಕೋವಿಡ್ ನಿಯಮ ಗಾಳಿಗೆ ತೂರಿದರು

ಧಾರವಾಡ: ಸಚಿವರಾದ ಬಳಿಕ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸಿದ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸನ್ಮಾನ ಮಾಡುವ ಭರದಲ್ಲಿ ಅವರ ಬೆಂಬಲಿಗರು, ಸರ್ಕಾರಿ ನೌಕರರು ಹಾಗೂ ಬಿಜೆಪಿ ಕಾರ್ಯಕರ್ತರು ಕೋವಿಡ್ ನಿಯಮಾವಳಿಗಳನ್ನೇ ಗಾಳಿಗೆ ತೂರಿದ್ದಾರೆ.

ಕೋವಿಡ್ ಹಾಗೂ ನೆರೆ ಪ್ರವಾಹ ಸಂಬಂಧ ಧಾರವಾಡದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯ ನಂತರ ಸಚಿವರಿಗೆ ಸನ್ಮಾನ ಮಾಡಲು ಅವರ ಅಭಿಮಾನಿಗಳು, ಸರ್ಕಾರಿ ನೌಕರರು ಮುಗಿಬಿದ್ದು ಕೋವಿಡ್ ನಿಯಮಾವಳಿಗಳನ್ನೇ ಗಾಳಿಗೆ ತೂರಿದ್ದಾರೆ.

ಕೊರೊನಾ ಸಂಬಂಧ ಈಗಾಗಲೇ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡಬೇಕು ಹಾಗೂ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಸರ್ಕಾರವೇ ಹೇಳುತ್ತಿದೆ. ಆದರೆ, ಸರ್ಕಾರದ ಭಾಗವಾದ ಸಚಿವರ ಸಭೆಯಲ್ಲೇ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ.

Edited By : Nagesh Gaonkar
Kshetra Samachara

Kshetra Samachara

07/08/2021 04:21 pm

Cinque Terre

31.86 K

Cinque Terre

2

ಸಂಬಂಧಿತ ಸುದ್ದಿ