ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಖಾಲಿ ಹುದ್ದೆಗಳ ಭರ್ತಿಗೆ ನಿರುದ್ಯೋಗಿ ಯುವಜನರ ಒತ್ತಾಯ

ಧಾರವಾಡ : ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು 2021ರಲ್ಲೇ ಭರ್ತಿ ಮಾಡಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯಿಂದ ನೂರಾರು ಕಾರ್ಯಕರ್ತರು ಸೇರಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿಯ ವರ್ಷಾಚರಣೆಯ ಅಂಗವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದರು.

ಅಷ್ಟೇ ಅಲ್ಲದೆ ಆರೋಗ್ಯ, ಶಿಕ್ಷಣ, ಸಾರಿಗೆ, ಕಂದಾಯ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಲಾಗುವುದು. ಅತಿಥಿ ಉಪನ್ಯಾಸಕರು, ಅತಿಥಿ ಬೋಧಕರು, ಆರೋಗ್ಯ ಕಾರ್ಯಕರ್ತರು, ಡಿ’ಗ್ರೂಪ್ ನೌಕರರು, 2016ರಿಂದ ಕೆಪಿಎಸ್ಸಿಯಲ್ಲಿ ವಿವಿಧ 19 ನೇಮಕಾತಿ ಅಧಿಸೂಚನೆಗಳು ಇನ್ನೂ ಕೂಡ ಪೂರ್ಣಗೊಂಡಿಲ್ಲ. ಆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

09/08/2021 02:19 pm

Cinque Terre

13.55 K

Cinque Terre

0

ಸಂಬಂಧಿತ ಸುದ್ದಿ