ನವಲಗುಂದ: ರಾಜ್ಯದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ತಮ್ಮ ತಮ್ಮ ಸ್ವಕ್ಷೇತ್ರಕ್ಕೆ ಭೆಟ್ಟಿ ನೀಡಿದ ಸಂಧರ್ಭದಲ್ಲಿ ಕೋವಿಡ-19 ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮೀತಿ ಪಕ್ಷದ ಧಾರವಾಡ ಜಿಲ್ಲಾ ಉಪಾಧ್ಯಕ್ಷ ಮಾಬುಸಾಬ ಯರಗುಪ್ಪಿ ಆರೋಪ ಮಾಡಿದರು.
ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನವಾಗಿ ಆಯ್ಕೆಯಾದಂತ ಸಚಿವರು ತಮ್ಮ ತಮ್ಮ ಕ್ಷೇತ್ರಕ್ಕೆ ತೆರಳಿದಾಗ ಸಾವಿರಾರು ಕಾರ್ಯಕರ್ತರನ್ನು ಸೇರಿಸಿಕೊಂಡು ಬೃಹತ್ ರ್ಯಾಲಿಯ ಮೂಲಕ ಮೆರವಣಿಗೆಯನ್ನು ಮಾಡಿದ್ದು, ಇದರಿಂದ ಕೋವಿಡ್ ಸೋಂಕು ಹೆಚ್ಚಾಗುವ ಸಾಧ್ಯತೆಯಿದ್ದು, ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬಿರುತ್ತದೆ. ಹಾಗಾಗಿ ಅವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಆಗ್ರಹಿಸಿದರು. ಇನ್ನು ಮನವಿಗೆ ಸ್ಪಂದಿಸದಿದ್ದರೆ ಹೈಕೋರ್ಟಲ್ಲಿ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
Kshetra Samachara
09/08/2021 08:32 pm