ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರಗಳು ಸಾಕಷ್ಟು ಬೆಳೆದಿವೆ. ಅಭಿವೃದ್ಧಿ ದೃಷ್ಟಿಯಿಂದ ಹುಬ್ಬಳ್ಳಿಗೊಂದು ಹಾಗೂ ಧಾರವಾಡಕ್ಕೊಂದು ಪ್ರತ್ಯೇಕ ಪಾಲಿಕೆ ಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಇದರ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ತಾಲೂಕಿನಲ್ಲಿ ಬೇಲೂರು ಕೈಗಾರಿಕಾ ಪ್ರದೇಶವಿದೆ. ಆದರೆ, ಅದು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಕೈಗಾರಿಕಾ ಕಂಪೆನಿಗಳ ಮಾಲೀಕರು, ಕೆಲಸಗಾರರು ಧಾರವಾಡದಲ್ಲೇ ಇರುವುದರಿಂದ ಆ ಲೋಡ್ ಪಾಲಿಕೆ ಮೇಲೆ ಬೀಳುತ್ತಿದೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪಾಲಿಕೆಗಳಾಗಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.
Kshetra Samachara
10/08/2021 10:40 pm