ಕಲಘಟಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಕಲಘಟಗಿ ಹಾಗೂ ಅಳ್ನಾವರ ಭಾಗದಲ್ಲಿ ಎಲ್ಲಾ ಅಂಗನವಾಡಿ ಮಕ್ಕಳಿಗೆ ಮೂವತ್ತು ಸಾವಿರ ಬಿಸ್ಕೆಟ್ ಗಳನ್ನು ವಿತರಣೆ ಮಾಡಲಾಗುವುದು ಎಂದು
ಸಂತೋಷ ಲಾಡ್ ಅವರು ತಿಳಿಸಿದರು.
ಅವರು ಮಡ್ಕಿಹೊನ್ನಳ್ಳಿ ಅಮೃತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ದಿ: ಅ 12 ರಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲು ತಿರ್ಮಾನಿಸಲಾಗಿದ್ದು,ಬಳ್ಳಾರಿಯಲ್ಲಿ ಎರಡು ಕ್ಯಾಂಟಿನ್ ತೆರೆಯಲಾಗುತ್ತಿದೆ.
ಅಲ್ಲದೇ ಕಲಘಟಗಿ ಕ್ಷೇತ್ರ ಹಾಗೂ ಯಲ್ಲಾಪುರ ಕ್ಷೇತ್ರದಲ್ಲಿಯೂ ಅಂಗನವಾಡಿಗಳ ಮಕ್ಕಳಿಗೆ ಮೂವತ್ತು ಸಾವಿರ ಬಿಸ್ಕೆಟ್ ಪ್ಯಾಕೇಟ್ ಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
Kshetra Samachara
11/08/2021 07:58 pm