ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ...!

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಅಭಿಯಾನ ಕುರಿತು ಕೂಡಲಸ‌ಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಾದಯಾತ್ರೆ ಮೂಲಕ ಹೋರಾಟ ಆರಂಭಿಸಿದ್ದ ಸ್ವಾಮೀಜಿಯವರು ಈಗ ಸಚಿವ ಸಿ.ಸಿ‌.ಪಾಟೀಲ ಉಪಸ್ಥಿತಿಯಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜನೆ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಜಯಮೃತ್ಯುಂಜಯ ಸ್ವಾಮೀಜಿಯವರ ನೈತೃತ್ವದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಹೋರಾಟದ ಮುಂದಿನ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಮತ್ತೆ ಹೋರಾಟದ ಕಿಚ್ಚು ಹಚ್ಚಲು ಸಿದ್ದತೆ ನಡೆಸಲಾಗುತ್ತಿದೆಯಾ ಕಾದು ನೋಡಬೇಕಿದೆ.

Edited By : Manjunath H D
Kshetra Samachara

Kshetra Samachara

12/08/2021 01:09 pm

Cinque Terre

21.53 K

Cinque Terre

0

ಸಂಬಂಧಿತ ಸುದ್ದಿ