ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಪಿಎಂಸಿ ನೂತನ ಅಧ್ಯಕ್ಷರಾಗಿ ಚನ್ನವೀರಗೌಡ ಆಯ್ಕೆ

ಧಾರವಾಡ: ಧಾರವಾಡದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ನರೇಂದ್ರ ಕ್ಷೇತ್ರದ ಸದಸ್ಯ ಚನ್ನವೀರಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಸಮಿತಿಯ ಸಭಾಂಗಣದಲ್ಲಿ ಜರುಗಿದ ಚುನಾವಣೆಯಲ್ಲಿ, ಚನ್ನವೀರಗೌಡ ಪಾಟೀಲ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆದ ತಹಶೀಲ್ದಾದಾರ ಡಾ.ಸಂತೋಷ ಬಿರಾದಾರ ಘೋಷಿಸಿದರು.

ಚನ್ನವೀರಗೌಡ ಬಿಜೆಪಿ ಸದಸ್ಯರಾಗಿದ್ದು, ಅವಿರೋಧವಾಗಿ ಆಯ್ಕೆಯಾದ ಅವರನ್ನು ಶಾಸಕ ಅಮೃತ ದೇಸಾಯಿ ಅವರು ಸನ್ಮಾನಿಸಿ, ಅಭಿನಂದಿಸಿದರು. ಬಿಜೆಪಿ ಮುಖಂಡರಾದ ತವನಪ್ಪ ಅಷ್ಟಗಿ, ಶಂಕರ ಕೋಮಾರದೇಸಾಯಿ, ರುದ್ರಪ್ಪ ಅರವಾಳದ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.

Edited By : Manjunath H D
Kshetra Samachara

Kshetra Samachara

13/08/2021 02:59 pm

Cinque Terre

23.47 K

Cinque Terre

0

ಸಂಬಂಧಿತ ಸುದ್ದಿ