ಧಾರವಾಡ: ಬಹು ನಿರೀಕ್ಷಿತ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸೆ.3 ರಂದು ನಡೆಯಲಿದ್ದು, ಆ.16 ರಿಂದಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈ ಸಂಬಂಧ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿರುವ ಅವರು, ಆ.16 ರಂದು ಚುನಾವಣಾ ಅಧಿಸೂಚನೆ ಹೊರಡಿಲಾಗುವುದು, ಆ.23 ರಂದು ನಾಮಪತ್ರ ಸಲ್ಲಿಸುವ ದಿನವಾಗಿದೆ. ಆ.24 ರಂದು ನಾಮಪತ್ರ ಪರಿಶೀಲಿಸಲಾಗುವುದು. ಆ.26 ರಂದು ಉಮೇದುವಾರಿಕೆ ಹಿಂಪಡೆಯುವ ಕೊನೆಯ ದಿನವಾಗಿರುತ್ತದೆ. ಸೆ.3 ರಂದು ಮತದಾನ ನಡೆಯಲಿದೆ. ಮತ ಎಣಿಕೆ ಸೆ.6 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.
ಬೆಳಿಗ್ಗೆ 7 ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ. ಸೆ.6 ರಂದು ಬೆಳಿಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ. ಸೆ.6 ರವರೆಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
14/08/2021 08:05 pm