ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮಕ್ಕೆ ಶನಿವಾರ ಕೊರೊನಾ ವಾರಿಯರ್ಸ್‌ಗಳಿಗೆ ಪ್ರಶಂಸನಾ ಪ್ರಮಾಣಪತ್ರ ವಿತರಣೆಗೆಂದು ಆಗಮಿಸಿದ ಶಾಸಕ ಅಮೃತ ದೇಸಾಯಿ ಅವರನ್ನು ಹಾರೋಬೆಳವಡಿ ಗ್ರಾಮಸ್ಥರು ಎತ್ತಿನ ಚಕ್ಕಡಿಯಲ್ಲಿ ಮೆರವಣಿಗೆ ಮಾಡುವ ಮುಖಾಂತರ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.
ಅಮೃತ ದೇಸಾಯಿ ಗೆಳೆಯರ ಬಳಗದ ವತಿಯಿಂದ ಶಾಸಕರು ತಮ್ಮ ಗ್ರಾಮೀಣ ಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಪ್ರಶಂಸನಾ ಪತ್ರ ಹಾಗೂ 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಇದೇ ಕಾರ್ಯಕ್ರಮಕ್ಕೆಂದು ಬಂದ ಶಾಸಕರಿಗೆ ಹಾರೋಬೆಳವಡಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ದೊರೆತಿದೆ.
ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ಸೇರಿದಂತೆ ಒಟ್ಟು 125 ಜನ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯ್ತಿ ಗ್ರೂಪ್ ಡಿ ನೌಕರರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಪ್ರಶಂಸನಾ ಪತ್ರ ಹಾಗೂ ಪ್ರೋತ್ಸಾಹ ಧನ ನೀಡಿದ ಶಾಸಕರು, ಕೊರೊನಾ ವಾರಿಯರ್ಸ್‌ಗಳ ಸೇವೆಯನ್ನು ಸ್ಮರಿಸಿದರು. ಕಷ್ಟದ ಸಮಯದಲ್ಲೂ ವಾರಿಯರ್ಸ್‌ಗಳು ತಮ್ಮ ಕುಟುಂಬವನ್ನೂ ಲೆಕ್ಕಿಸದೇ ಸೇವೆ ಸಲ್ಲಿಸಿದ್ದಾರೆ. ಅದಕ್ಕಾಗಿ ಅವರಿಗೆ ಪ್ರಶಂಸನೆ ನೀಡಲಾಗುತ್ತಿದೆ. ನನ್ನ ಕ್ಷೇತ್ರ ವ್ಯಾಪ್ತಿಯ ಎಲ್ಲ ವಾರಿಯರ್ಸ್‌ಗಳಿಗೆ ಈ ಮೂಲಕ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದರು.
ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ, ಪ್ರಿಯಾ ದೇಸಾಯಿ, ತಹಶೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
14/08/2021 08:17 pm