ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚುನಾವಣಾ ಸಿಬ್ಬಂದಿ ರಾಜಕೀಯ ನಾಯಕರೊಂದಿಗೆ ಚರ್ಚೆ ಮಾಡುವಂತಿಲ್ಲ

ಧಾರವಾಡ: ಹುಬ್ಬಳ್ಳಿ,ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ಆಗಸ್ಟ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಯಾವುದೇ ಅಧಿಕಾರಿ, ನೌಕರರು ಚುನಾಯಿತ ಪ್ರತಿನಿಧಿಗಳು, ರಾಜಕೀಯ ವ್ಯಕ್ತಿಗಳನ್ನು ಭೇಟಿಯಾಗುವುದು, ಚರ್ಚೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಮಾದರಿ ನೀತಿ ಸಂಹಿತೆ ಜಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದರಿ ನೀತಿ ಸಂಹಿತೆಯು ಆಗಸ್ಟ್ 16 ರಿಂದ ಸೆಪ್ಟಂಬರ್ 9 ರವರೆಗೆ ಜಾರಿಯಲ್ಲಿರುತ್ತದೆ. ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಹಾನಗರಪಾಲಿಕೆ ವ್ಯಾಪ್ತಿಗೆ ನೀತಿ ಸಂಹಿತೆ ಅನ್ವಯಿಸುತ್ತದೆ. ಯಾವುದೇ ಸಾಂಸ್ಕೃತಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಲು ಅವಕಾಶವಿಲ್ಲ. ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಹುದು ಆದರೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಬಾರದು. ಮುಂಬಡ್ತಿಗಳನ್ನು ನೀಡಲು ಬಾಧಕವಿಲ್ಲ. ಚುನಾವಣೆಗಳಲ್ಲಿ ಸರ್ಕಾರಿ ನೌಕರರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ. ವೀಡಿಯೋ ಚಿತ್ರೀಕರಣ, ಫೋಟೋ ದಾಖಲೆ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದರು.

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿ, ಪ್ರಸಕ್ತ ಚುನಾವಣೆಯಲ್ಲಿ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಎಚ್ಚರವಹಿಸಬೇಕು ಎಂದರು.

ಡಿಯುಡಿಸಿಯ ಯೋಜನಾ ನಿರ್ದೇಶಕ ರುದ್ರೇಶ ಸಭೆಗೆ ಮಾದರಿ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

14/08/2021 10:03 pm

Cinque Terre

34.91 K

Cinque Terre

0

ಸಂಬಂಧಿತ ಸುದ್ದಿ