ಹುಬ್ಬಳ್ಳಿ: ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯಭೇರಿ ಬಾರಿಸುವ ಮೂಲಕ ಕಮಲ ಪಡೆಯು ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ದಾಖಲೆಯ ಜಯವನ್ನು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುವಂತ ಭರವಸೆ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಜನಪರ ಕಾರ್ಯವನ್ನು ಮಾಡಿದ್ದು, ಈ ನಿಟ್ಟಿನಲ್ಲಿ ದೇಶದಲ್ಲಿ, ರಾಜ್ಯದಲ್ಲಿ ಬಿಜೆಪಿ ಕೆಲಸ ಜನರಿಗೆ ಗೊತ್ತಿದೆ. ಆದ್ದರಿಂದ ಪಾಲಿಕೆ ಚುನಾವಣೆಯಲ್ಲಿ ಜನರು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂದು ಅವರು ಹೇಳಿದರು.
Kshetra Samachara
16/08/2021 12:00 pm