ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮತ್ತಷ್ಟು ಅವಳಿನಗರದ ಜನರ ಸೇವೆ ಮಾಡಲು ಪಾಲಿಕೆಯಲ್ಲಿ ಗೆಲುವು ಸಾಧಿಸಬೇಕಿದೆ:ಮುನೇನಕೊಪ್ಪ

ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಬಿಜೆಪಿ ಹೋರಾಟ ನಡೆಸುತ್ತಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯನ್ನು ಮುಟ್ಟಿಸುವಲ್ಲಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು..

ಹುಬ್ಬಳ್ಳಿಯಲ್ಲಿ ಬಿಜೆಪಿ ಜನಾರ್ಶಿವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೋಸ್ಕರ ಇರುವ ಪಕ್ಷ. ಬಿಜೆಪಿ ಅಧಿಕಾರಿಗೆ ಬಂದ ನಂತರ ಅವಳಿನಗರದ ಜನರಿಗೆ 24×7 ಕುಡಿಯುವ ನೀರು ಒದಗಿಸಲಾಗುತ್ತಿದೆ. 288 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಟೆಂಡರ್ ಕರೆಯಲಾಗಿದೆ ಎಂದರು.

ಜಲಧಾರೆ, ಜಲಮೀಷನ್ ಮೂಲಕ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ. ಅಲ್ಲದೇ ಮತ್ತಷ್ಟು ಜನರ ಸೇವೆ ಮಾಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವೂ ಗೆಲುವು ಸಾಧಿಸಬೇಕಾಗಿದೆ ಎಂದು ಅವರು ಹೇಳಿದರು.

Edited By : Shivu K
Kshetra Samachara

Kshetra Samachara

16/08/2021 12:10 pm

Cinque Terre

26.4 K

Cinque Terre

3

ಸಂಬಂಧಿತ ಸುದ್ದಿ