ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹಾಗೂ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಚಾಲನೆ ನೀಡಿದರು.
ಇದೇ ವೇಳೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ನೂತನ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ, ಶಾಸಕ ಅಮೃತ ದೇಸಾಯಿ ಸೇರಿದಂತೆ ಇತರರು ಭಾಗಿಯಾಗಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Kshetra Samachara
16/08/2021 12:11 pm