ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ಸುಮಾರು ಎರಡುವರೆ ವರ್ಷಗಳಿಂದ ಪಾಲಿಕೆ ಚುನಾವಣೆ ನಿರೀಕ್ಷೆಯಲ್ಲಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಚುನಾವಣೆ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಗೆ ಸಾಕಷ್ಟು ಕಾರ್ಯಕರ್ತರು ಚುನಾವಣಾ ಆಕಾಂಕ್ಷಿಗಳು ಆಗಮಿಸಿದ್ದು, ಗುರುವಾರ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ
Kshetra Samachara
17/08/2021 01:43 pm