ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಾರಂಭಗೊಂಡ ಮೂರನೇ ದಿನವಾದ ಇಂದು ಒಂದು ನಾಮಪತ್ರ ಸಲ್ಲಿಕೆಯಾಗಿದೆ.
ಮಹಾನಗರ ಪಾಲಿಕೆಯ 75ನೇ ವಾರ್ಡ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಬೀಬಿ ಆಯಿಷಾ ಮಕ್ತುಮ ಹುಸೇನ ಯರಗಟ್ಟಿ ಅವರು ಇಂದು ಮಹಾನಗರ ಪಾಲಿಕೆ ನೌಕರ ಪತ್ತಿನ ಸಂಘದ ಕಚೇರಿಯಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
18/08/2021 06:09 pm