ಹುಬ್ಬಳ್ಳಿ: ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಆಗಸ್ಟ್ 20 ಹಾಗೂ 22 ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.
ಆ.20 ರಂದು ಸಂಜೆ 4-15 ಗಂಟೆಗೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4-25 ಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳುವರು.
ಆ.22 ರಂದು ಬೆಳಿಗ್ಗೆ 9-50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 10-05 ನಿಮಿಷಕ್ಕೆ ಅನಂತ ಗ್ರ್ಯಾಂಡ್ ಹೋಟೆಲ್‍ನ ಖಾಸಗಿ ಕಾರ್ಯಕ್ರಮಕ್ಕೆ ತೆರಳುವರು. 10-25 ಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
19/08/2021 11:31 am