ಧಾರವಾಡ: ಪ್ರಸಕ್ತ ವರ್ಷವೂ ಸರ್ಕಾರ ಕೊರೊನಾ ನೆಪದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಪರವಾನಿಗಿ ನೀಡದೇ ಇರುವುದು ಸರಿಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದ್ದಾರೆ.
ಕಳೆದ ವರ್ಷ ಕೂಡ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಪರವಾನಿಗಿ ನೀಡಿರಲಿಲ್ಲ. ಸರ್ಕಾರ ಈ ಕುರಿತು ಸ್ಪಷ್ಟೀಕರಣ ನೀಡಬೇಕು ಹಾಗೂ ಎಲ್ಲ ಕಡೆಯೂ ಗಣಪತಿ ಉತ್ಸವಕ್ಕೆ ಅನುಮತಿ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮುತಾಲಿಕ್ ಎಚ್ಚರಿಸಿದರು.
ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ನೀಡಿ ಸಾರ್ವಜನಿಕ ಗಣೇಶೋತ್ಸವ ನಿಷೇಧ ಮಾಡಿದ್ದು ಸರಿಯಲ್ಲ ಕೊರೊನಾ ನಿಯಮ ಸಾವಿರ ಹಾಕಿದರೂ ಅದರಂತೆ ಅವುಗಳನ್ನು ಪಾಲಿಸಿ ಗಣೇಶೋತ್ಸವ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Kshetra Samachara
20/08/2021 12:03 pm