ಹುಬ್ಬಳ್ಳಿ: ಸುಮಾರು ಎರಡುವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೇ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡ ಕೈ ಪಾಳೆಯದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ.
ಹೌದು.. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ ಅಭ್ಯರ್ಥಿಗಳ ಆಯ್ಕೆಯಲ್ಲಿ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಸತೀಶ್ ಜಾರಕಿಹೋಳಿ, ತನ್ವೀರ್ ಸೇಠ್ ಹಾಗೂ ದ್ರುವ ನಾರಾಯಣ ನಾಯಕರ ತಂಡ ಹೈರಾಣಾಗಿದ್ದಾರೆ.
ಕಾಂಗ್ರೆಸ್ ಟಿಕೆಟ್ ಗಾಗಿ ಗದ್ದಲ ನಡೆಯುತ್ತಿದ್ದು, ತನ್ವೀರ್ ಸೇಟ್ ಗೆ ಮನವಿ ಸಲ್ಲಿಕೆ ಮಾಡುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು ವಿರುದ್ದ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ತಮ್ಮವರಿಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸುವುದಾಗಿ ಕೈ ಕಾರ್ಯಕರ್ತರ ಎಚ್ಚರಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಕೈ ಮುಖಂಡರು ನಿರತರಾಗಿದ್ದಾರೆ. ಒಟ್ಟಿನಲ್ಲಿ ನಾಮ ಪತ್ರ ಸಲ್ಲಿಕೆಯ ಮೂರು ದಿನ ಮುಗಿದರೂ ಮುಗಿಯದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ.
Kshetra Samachara
20/08/2021 03:00 pm