ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿಗೆ ಮುಖ್ಯಮಂತ್ರಿಯವರಿಂದ ಸ್ವಾಗತ

ಹುಬ್ಬಳ್ಳಿ: ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ ಅವರು ಬರಮಾಡಿಕೊಂಡರು.

ನಂತರ ಗೋಕುಲ ರಸ್ತೆಯ ಖಾಸಗಿ ಹೊಟೆಲ್‌ವೊಂದರಲ್ಲಿ ಏರ್ಪಡಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮರಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಯವರು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.

Edited By : Nagaraj Tulugeri
Kshetra Samachara

Kshetra Samachara

22/08/2021 11:29 am

Cinque Terre

36.45 K

Cinque Terre

0

ಸಂಬಂಧಿತ ಸುದ್ದಿ