ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾಲಿಕೆ ಚುನಾವಣೆಗೆ ಸಿದ್ಧತೆ: ಶಂಕರಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ...!

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಮಲ ಪಡೆಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದು, ಸಚಿವ ಶಂಕರಪಾಟೀಲ ನೇತೃತ್ವದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಈಗಾಗಲೇ ಹು-ಧಾ ಮಹಾನಗರ ಪಾಲಿಕೆಯ 82 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನಾಮಪತ್ರ ಸಲ್ಲಿಕೆ ಕೂಡ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಎಲ್ಲ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಯಲ್ಲಿ ಶ್ರಮಿಸುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೈ ಜೋಡಿಸಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇನ್ನೂ ಕಾರ್ಯಕರ್ತರು ಕೂಡ ಸಚಿವರ ಮಾತಿಗೆ ಬೆಂಬಲ ನೀಡಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದರು.

Edited By : Manjunath H D
Kshetra Samachara

Kshetra Samachara

24/08/2021 01:21 pm

Cinque Terre

36.34 K

Cinque Terre

3

ಸಂಬಂಧಿತ ಸುದ್ದಿ