ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲಿಕೆ ಚುನಾವಣೆ ಈ ಭಾರಿ ನಮ್ಮದೆ ಗೆಲವು- ಶೆಟ್ಟರ ವಿಶ್ವಾಸ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಚುನಾವಣೆ ಪೂರ್ವದಲ್ಲೇ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವುದು ಕಾರ್ಯಕರ್ತರಲ್ಲಿ ಹುರುಪು ಹೆಚ್ಚಿಸಿದೆ ಎಂದರು.

ಬಿಜೆಪಿ ರಾಜಕೀಯ ಪಕ್ಷವಾಗಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ ಎಂದ ಅವರು, ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸಿದ್ದ ಆಕಾಂಕ್ಷೆಗಳು ದೊಡ್ಡ ಸಂಖ್ಯೆಯಲ್ಲಿದ್ದರು. ಕೆಲವರಿಗೆ ಟಿಕೆಟ್ ಕೈ ತಪ್ಪಿ ನೋವಾಗಿದ್ದು ನಿಜ. ಆದರೆ, ಅವರನ್ನು ಸಮಾಧಾನಪಡಿಸಲಾಗಿದ್ದು, ಇದೀಗ ಪಕ್ಷದ ಅಭ್ಯರ್ಥಿಗಳು ಪರ ಅವರು ವಾರ್ಡ್ಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

27/08/2021 12:00 pm

Cinque Terre

24.21 K

Cinque Terre

7

ಸಂಬಂಧಿತ ಸುದ್ದಿ