ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾ ಜನತೆ ಎರಡು ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ ಅದೇ ರೀತಿ ಈ ಬಾರಿಯು ಹ್ಯಾಟ್ರಿಕ್ ವಿಜಯವನ್ನು ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಅನ್ನುವ ವಿಶ್ವಾಸವಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ -2021 ರ ಅಂಗವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದಂತೆ ಹುಬ್ಬಳ್ಳಿ ಧಾರವಾಡ ಮಹಾ ಜನತೆ ಈಗಾಗಲೇ ಎರಡು ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ.ಮೂರನೇ ಬಾರಿ ಹ್ಯಾಟ್ರಿಕ್ ವಿಜಯ ಆಗಲ್ಲಿದೆ ಎಂಬುವ ವಿಶ್ವಾಸವಿದೆ ಎಂದು ಅವರು ಹೇಳಿದರು .
ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ,ಪಕ್ಷದ ಸ್ಥಳೀಯ ಮುಖಂಡರು ಸೇರಿದಂತೆ ಅನೇಕ ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
27/08/2021 09:37 pm