ಹುಬ್ಬಳ್ಳಿ- ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಗಣೇಶ ಟಗರಗುಂಟಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇನ್ನು, ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗಣೇಶ ಟಗರಗುಂಟಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ನೇರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನಂತರ ಬಂಡಾಯ ಎದ್ದು ಸ್ವತಂತ್ರವಾಗಿ ಕಣಕ್ಕೆ ಇಳಿದಿದ್ದರು. ಇದೀಗ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
Kshetra Samachara
28/08/2021 11:20 am