ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 23 ಅಂಶಗಳ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅವಳಿ ನಗರಕ್ಕೆ ಮೆಟ್ರೋ ಭಾಗ್ಯದ ಭರವಸೆ ನೀಡಿದೆ.
ಪಾಲಿಕೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದರೆ ಹುಬ್ಬಳ್ಳಿ- ಧಾರವಾಡ ನಡುವೆ ಮೆಟ್ರೋ ರೈಲು ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಜೊತೆಗೆ ಜನರ ಆರೋಗ್ಯಕ್ಕೆ ಒತ್ತು, ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲೆ ನಿರ್ಮಾಣ, ರಾಜಕಾಲುವೆ ದುರಸ್ತಿ, ಕ್ರೀಡಾಂಗಣ ನಿರ್ಮಾಣ ಮಾಡುವುದು ಕಾಂಗ್ರೆಸ್ ಘೋಷಿಸಿದ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.
ಇತ್ತ ಆಮ್ ಆದ್ಮಿ ಪಕ್ಷವು ಕೂಡ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್ಟಾಪ್, ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ನೀಡಿದೆ.
Kshetra Samachara
29/08/2021 08:32 am