ಅಣ್ಣಿಗೇರಿ : ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹೆಸರು ಖರೀದಿ ಕೇಂದ್ರ ಉದ್ಘಾಟನೆ ಮಾಡಿ ಮಾತನಾಡಿದ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕೇಂದ್ರ ಸರ್ಕಾರದ ಅನುದಾನದ ಅಡಿಯಲ್ಲಿ ಪ್ರತಿ ಕ್ವಿಂಟಾಲ್ ಹೆಸರಿಗೆ ರೂ. 7275/- ರಂತೆ ಖರೀದಿ ಮಾಡಲಾಗುವದು. ಪ್ರತಿ ರೈತನಿಂದ 6 ಕ್ವಿಂಟಾಲ ಹೆಸರನ್ನು ಮಾತ್ರ ಖರೀದಿಸಲಾಗುವದು. ಮುಂಬರುವ ದಿನದಲ್ಲಿ ರೈತರಿಗೆ ಇನ್ನೂ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲಾಗುವುದು. ರೈತ ಬದುಕಿದರೆ ಈಡೀ ಜಗತ್ತೆ ಬದಕುತ್ತದೆ ಎಂದು ಉಸ್ತುವಾರಿ ಸಚಿವ ಮುನೇನಕೊಪ್ಪ ಹೇಳಿದರು.
Kshetra Samachara
30/08/2021 06:21 pm