ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ- ಬಿಜೆಪಿಯಿಂದ ಮಾಜಿ ಮೇಯರ್ ಸೇರಿ 16 ಜನರ ಉಚ್ಚಾಟನೆ.!

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ವಿವಿಧ ವಾರ್ಡ್‌ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ ಬಂಡಾಯ ಅಭ್ಯರ್ಥಿಗಳು ಸೇರಿದಂತೆ ಅವರಿಗೆ ಬೆಂಬಲ‌ ನೀಡಿದ ಬಿಜೆಪಿ ಘಟಕಗಳ 16 ಜನರನ್ನು ಪಕ್ಷದಿಂದ ಉಚ್ಚಾಟಿಸಿ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷ, ಶಾಸಕ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ.

ಮಾಜಿ‌ ಮೇಯರ್ ಮಂಜುಳಾ ಅಕ್ಕೂರ, ಮಾಜಿ ಉಪ ಮೇಯರ್ ಲಕ್ಷ್ಮೀ ‌ಉಪ್ಪಾರ, ಅವರ ಪತಿ ಮಾಜಿ ಪಾಲಿಕೆ ಸದಸ್ಯ ಲಕ್ಷ್ಮಣ ಉಪ್ಪಾರ, ಪುತ್ರ ಬಿಜೆಪಿ ಯುವ ಘಟಕದ ಅಧ್ಯಕ್ಷ ಕಿರಣ ಉಪ್ಪಾರ ಸೇರಿದಂತೆ 16 ಜನರನ್ನು ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಬಿಜೆಪಿ ಬ್ಯಾನರ್‌ ಅಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು ಬಿಜೆಪಿ ಪಕ್ಷದ ನಾಯಕರು ಸಾಕಷ್ಟು ಪ್ರಯತ್ನಿಸಿದರೂ, ಬಂಡಾಯ ಅಭ್ಯರ್ಥಿಗಳು ಜಪ್ಪಯ್ಯ ಎನ್ನದಿರುವ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಚಾಟನೆ ಅಸ್ತ್ರ ಪ್ರಯೋಗಿಸಿದೆ.

Edited By : Vijay Kumar
Kshetra Samachara

Kshetra Samachara

30/08/2021 10:35 pm

Cinque Terre

48.62 K

Cinque Terre

10

ಸಂಬಂಧಿತ ಸುದ್ದಿ