ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯುದ್ಧ ಗೆಲ್ಲಲು ಸಜ್ಜಾದ ಅನಿರುದ್ಧ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್‌ ನಂಬರ್ 15 ರಿಂದ ಸ್ಪರ್ಧೆ ಮಾಡಿರುವ ಪಾಲಿಕೆ ಮಾಜಿ ಸದಸ್ಯ ದೀಪಕ ಚಿಂಚೋರೆ ಅವರ ಪುತ್ರ ಅನಿರುದ್ಧ ಚಿಂಚೋರೆ ಅವರು ವಾರ್ಡ್ ನಂಬರ್ 15ರಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಅನಿರುದ್ಧ ಅವರು ತಮ್ಮ ವಾರ್ಡ್‌ನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ತಮ್ಮ ಕಾರ್ಯಕರ್ತರೊಂದಿಗೆ ಮನೆ, ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದು, ಅನಿರುದ್ಧ ಅವರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಅನಿರುದ್ಧ ಅವರ ಸ್ಪರ್ಧೆಯಿಂದ ವಾರ್ಡ್ ನಂಬರ್ 15ರ ಚುನಾವಣಾ ಕಣ ತೀವ್ರ ರಂಗು ಪಡೆದುಕೊಂಡಿದೆ. ಮಗನ ಗೆಲುವಿಗಾಗಿ ಪಾಲಿಕೆ ಮಾಜಿ ಸದಸ್ಯ ದೀಪಕ ಚಿಂಚೋರೆ ಕೂಡ ಟೊಂಕ ಕಟ್ಟಿ ನಿಂತಿದ್ದಾರೆ.

Edited By : Manjunath H D
Kshetra Samachara

Kshetra Samachara

31/08/2021 12:11 pm

Cinque Terre

38.21 K

Cinque Terre

1

ಸಂಬಂಧಿತ ಸುದ್ದಿ