ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಬಿಜೆಪಿ ಅಬ್ಬರದ ಪ್ರಚಾರ ನಡೆಸಿದೆ.
ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಕೂಡ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಇತ್ತ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸ್ವತಃ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್‌ಕುಮಾರ ಕಟೀಲ್ ಅವರೇ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ವಾರ್ಡ್ ನಂಬರ್ 5 ರಲ್ಲಿ ಬಿಜೆಪಿ ಅಭ್ಯರ್ಥಿ ನಿತಿನ್ ಇಂಡಿ ಅವರ ಪರವಾಗಿ ಭರ್ಜರಿ ಮತ ಬೇಟೆ ನಡೆಸಿದರು.
ಅಲ್ಲಲ್ಲಿ ರೋಡ್ ಷೋ ಕೂಡ ನಡೆಸಿದ ಕಟೀಲ್ ಅವರು, ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಿದರು. ಶಾಸಕ ಅಮೃತ ದೇಸಾಯಿ ಕೂಡ ತಮ್ಮ ವ್ಯಾಪ್ತಿಗೆ ಬರುವ ವಾರ್ಡ್‌ಗಳಲ್ಲಿ ಕಮಲ ಅರಳಿಸಲು ಪಣ ತೊಟ್ಟಿದ್ದು, ಅವರೂ ಕೂಡ ಕಟೀಲ್ ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದರು.
Kshetra Samachara
31/08/2021 01:53 pm