ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಸೆಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಯುವಕರ ತಂಡವೊಂದು ಚನ್ನಮ್ಮ ವೃತ್ತದಲ್ಲಿ ಮತದಾನದ ಜಾಗೃತಿ ಮೂಡಿಸಿತು.
ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಸಂವಿಧಾನ ಕಲ್ಪಿಸಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಮತದಾನ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು. ಚುನಾವಣೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡಬಾರದು. ಮತದಾರರು ಹಣ, ಮದ್ಯದ ಆಮಿಷಕ್ಕೆ ಒಳಗಾಗದೆ ಸ್ವಂತ ಆಲೋಚನೆಯಿಂದ ಮತ ಚಲಾಯಿಸುವಂತೆ ಜನ ಸಾಮಾನ್ಯರಿಗೆ ಕರಪತ್ರಗಳನ್ನು ತೋರಿಸಿ ಮನವಿ ಮಾಡಿದರು.
Kshetra Samachara
02/09/2021 01:17 pm