ಧಾರವಾಡ : ಮೈಸೂರಿನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮೈಸೂರಿನಲ್ಲಿ ನಡೆದ ಘಟನೆಯಿಂದಾಗಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಮೈಸೂರಿನ ಬೆಟ್ಟದಲ್ಲಿ ಯುವತಿಯ ಮೇಲಿನ ಅತ್ಯಾಚಾರವನ್ನು ನಾವು ಖಂಡಿಸುತ್ತೇವೆ. ಅತ್ಯಾಚಾರ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಯುವತಿ ಮತ್ತು ಯುವತಿಯ ಕುಟುಂಬಕ್ಕೆ ರಕ್ಷಣೆ ಒದಗಿಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಗೌರಮ್ಮ ಬಲೋಗಿ ನಾಡಗೌಡರ ನೇತೃತ್ವದಲ್ಲಿ ಮನವಿ ನೀಡಲಾಯಿತು.
Kshetra Samachara
02/09/2021 09:05 pm