ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಈ ಹಿನ್ನೆಲೆ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಈಗಾಗಲೇ ಕ್ರಮ ಕೈಗೊಂಡಿದ್ದು, ಪೊಲೀಸರಿಂದ ಸಾಕಷ್ಟು ನಿಗಾ ವಹಿಸಲಾಗಿದೆ. ಇನ್ನು ಮತ ಎಣಿಕೆ ಪ್ರದೇಶದೊಳಗೆ ಕೇವಲ ಇಬ್ಬರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಪೊಲೀಸರಿಂದ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತಿದೆ.
Kshetra Samachara
06/09/2021 10:25 am