ಧಾರವಾಡ: ನಾನು ಇಡೀ ಧಾರವಾಡ ಜಿಲ್ಲೆಯ ಉಸ್ತುವಾರಿ ಮಂತ್ರಿ. ಧಾರವಾಡ ಜಿಲ್ಲೆ ಒಂದೇ ಎಂದು ತಿಳಿದುಕೊಂಡಿದ್ದೇನೆ. ಹುಬ್ಬಳ್ಳಿ, ಧಾರವಾಡ ಬೇರೆ ಬೇರೆ ಮಾಡುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮತ ಹಾಕಿದ್ದಾರೆ. ಬಿಜೆಪಿಯವರೇ ಮೇಯರ್ ಆಗುತ್ತಾರೆ. ಹುಬ್ಬಳ್ಳಿಯವರಾಗಬೇಕಾ ಅಥವಾ ಧಾರವಾಡದವರಾಗಬೇಕಾ ಎಂಬುದು ಮುಖ್ಯ ಅಲ್ಲ. ಇದು ಅಖಂಡ ಧಾರವಾಡ ಜಿಲ್ಲೆ. ಹೀಗಾಗಿ ಧಾರವಾಡ ಜಿಲ್ಲೆ ಒಂದೇ ಆಗಿರಲಿ ಎಂದರು.
75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯ್ತಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಎಲ್ಲೆಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆಯೋ ಅವುಗಳ ವೇಗ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ವಸತಿ ರಹಿತರಿಗೆ ಮೀಸಲಿಟ್ಟ 240 ಎಕರೆ ಜಮೀನನ್ನು ಬೇರೆಯವರಿಗೆ ಹಂಚಿಕೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
Kshetra Samachara
11/09/2021 04:27 pm