ಹುಬ್ಬಳ್ಳಿ: ಬಿಜೆಪಿ ಸರಕಾರ ಅಧಿಕಾರ ನಡೆಸುವಲ್ಲಿ ವಿಫಲವಾದ ಕಾರಣ, ರಾಜ್ಯದಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ನೀಡಿ ಬೆಂಬಲ ನೀಡಿದ್ದಾರೆ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತ ವೈಖರಿ ನೋಡಿ ಜನ ಬೇಸತ್ತಿದ್ದಾರೆ. ನಮ್ಮ ಪಕ್ಷಕ್ಕೆ 33 ಸ್ಥಾನಗಳನ್ನ ಗೆಲ್ಲಿಸುವಲ್ಲಿ ಕಾರ್ಯಕರ್ತರು ಮತ್ತು ಮತದಾರರು ಸಹಕರಿಸಿದ್ದಾರೆ. ಹೀಗಾಗಿ ಮತದಾರರು ಕಾಂಗ್ರೆಸ್ ಪಕ್ಷದ ಕಡೆ ವಾಲಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದರು.
ಇನ್ನೂ ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ ಬಿಜೆಪಿಯ ಪ್ರಭಾವಿ ನಾಯಕರುಗಳು ಇದ್ದರೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದಾರೆ ಜೊತೆಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದ್ರೂ ಜನಬೆಂಬಲ ಪಡೆಯುವಲ್ಲಿ ವಿಫಲವಾಗಿದೆ ಎಂದು ಜನವಿರೋಧಿ ಆಡಳಿತವನ್ನ ಬಿಜೆಪಿ ಪಕ್ಷ ನೀಡುತ್ತಿದೆ ಎಂದು ಕಿಡಿಕಾರಿದರು.
Kshetra Samachara
12/09/2021 12:34 pm