ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ. 52ನೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚೇತನ ಎಸ್. ಹಿರೇಕೆರೂರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನ ಮೂಡಿದೆ.
ಹೌದು. ಮೊದಲಿಗೆ ವಾರ್ಡ್ ನಂಬರ 52ಕ್ಕೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲು ಹರಸಾಹಸ ಪಟ್ಟು, ಕೊನೆ ಕ್ಷಣದಲ್ಲಿ ಟಿಕೆಟ್ ವಂಚಿತರಾಗಿದ್ದರು. ಆದ್ದರಿಂದ ಚೇತನ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವನ್ನು ಸಾಧಿಸಿ ಈಗ ಪಾಲಿಕೆ ಸದಸ್ಯರಾಗಿದ್ದಾರೆ. ಆದರೆ ಕುತೂಹಲ ಎಂದರೆ ಇಂದು ಪಾಲಿಕೆ ಚುನಾವಣೆಯಲ್ಲಿ ವಿಜೇತರಾದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹುಬ್ಬಳ್ಳಿಗೆ ಬಂದಿದ್ದರು. ಖಾಸಗಿ ಹೋಟೆಲ್‌ನಲ್ಲಿ ಡಿಕೆ ಶಿವಕುಮಾರ್ ಅವರನ್ನು ಚೇತನ ಭೇಟಿ ಮಾಡಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿರುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಪಕ್ಷೇತರ ಅಭ್ಯರ್ಥಿಗಳನ್ನು ಪಕ್ಷಕ್ಕೆ ಕರೆತರಲು ತಂತ್ರ ರೂಪಿಸಿರುವ ಕಾಂಗ್ರೆಸ್ ನಾಯಕರಿಗೆ ಮೊದಲ ಹೆಜ್ಜೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗ ನೂತನ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರ ಪಕ್ಷಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
Kshetra Samachara
12/09/2021 12:59 pm