ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್, ಉಪಮೇಯರ್- ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯಲ್ಲಿ ಮೇಯರ್ ಮತ್ತು ಉಪಮೇಯರ್ ಬಿಜೆಪಿಯವರೇ ಆಗುವುದು ಸ್ಪಷ್ಟ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರು ಆರ್ಶೀವಾದ ಮಾಡಿದ ಪರಿಣಾಮವಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಜನಪ್ರತಿನಿಧಿಗಳ ವಿಶೇಷ ಸ್ಥಾನ ಹಾಕುವ ಮೂಲಕ 45 ಸ್ಥಾನ ನಾವು ಪಡೆಯಲಿದ್ದೇವೆ. ಅಲ್ಲದೇ ಪಕ್ಷೇತರರು ನಮ್ಮ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೇ ಮೇಯರ್, ಉಪ ಮೇಯರ್ ಆಗೋದ ಖಚಿತ ಎಂದರು.

ಈಗಾಗಲೇ ಬೆಳಗಾವಿಯಲ್ಲಿ ನಮ್ಮವರೇ ಮೇಯರ್ ಉಪಮೇಯರ್ ಆಗಲಿದ್ದಾರೆ. ಗುಲಬರ್ಗಾ ಮಹಾನಗರ ಪಾಲಿಕೆಯಲ್ಲಿ ನಮ್ಮ ಅಭ್ಯರ್ಥಿಗಳೇ ಅತಿ ಹೆಚ್ಚು ಆರಿಸಿ ಬಂದಿದ್ದಾರೆ. ಅಲ್ಲಿಯೂ ಜೆಡಿಎಸ್ ಬೆಂಬಲಕ್ಕಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ನಾವೇ ಮೇಯರ್ ಉಪಮೇಯರ್ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

12/09/2021 04:45 pm

Cinque Terre

60.87 K

Cinque Terre

11

ಸಂಬಂಧಿತ ಸುದ್ದಿ