ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು: ಉಪಮೇಯರ್ ಸ್ಥಾನಕ್ಕೆ ದುರ್ಗಮ್ಮ...?

ಹುಬ್ಬಳ್ಳಿ: 39 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಒಂದು ದೊಡ್ಡ ಸವಾಲಾಗಿತ್ತು. ಮೇಯರ್ ಗಾದಿಗೆ ಪೈಪೋಟಿ ನಡೆಸಿದ ಅಭ್ಯರ್ಥಿಗಳ ಜಟಾಪಟಿ ಒಂದು ಕಡೆಯಾದರೇ ಮತ್ತೊಂದೆಡೆ ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಯೇ ಇರಲಿಲ್ಲ. ಹೀಗಾಗಿ ಬಿಜೆಪಿ ಗೆದ್ದು ಸೋಲಬೇಕಾ ಎಂಬುವಂತ ಸಮಸ್ಯೆ ಸುಳಿಯಲ್ಲಿ ಸಿಲುಕಿತ್ತು. ಆದರೆ ಈಗ ಮಾತ್ರ ಕಮಲ ಪಡೆಯು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಹೌದು.. ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ.

ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಶಂ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್ ಮತ್ತು 6 ಪಕ್ಷೇತರರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆದರೆ ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳು ಇಲ್ಲದಿರುವುದರಿಂದ ಸಮಸ್ಯೆಗೆ ಸಿಲುಕಿಕೊಂಡಿತ್ತು.

ಕರ್ನಾಟಕ ಸರ್ಕಾರ ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಮೀಸಲಾತಿ ಘೋಷಣೆ ಮಾಡಿದೆ. ಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ 'ಎ' ಮತ್ತು ಉಪಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿದೆ. 39 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಅರ್ಹರಿರುವ ಯಾವುದೇ ಅಭ್ಯರ್ಥಿ ಇಲ್ಲ. ಆದ್ದರಿಂದ ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಚುನಾವಣೆ ಗೆದ್ದಿರುವ 69ನೇ ವಾರ್ಡ್‌ನ ದುರ್ಗಮ್ಮ ಬಿಜವಾಡ್‌ಗೆ ಉಪ ಮೇಯರ್ ಪಟ್ಟವನ್ನು ಬಿಟ್ಟುಕೊಡಲಿದೆ.

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ 69ನೇ ವಾರ್ಡ್‌ನಿಂದ ದುರ್ಗಮ್ಮ ಬಿಜವಾಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಕಾರಣ ದುರ್ಗಮ್ಮ ಬಿಜವಾಡ ಪತಿ ಶಶಿಕಾಂತ ಬಿಜವಾಡರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಈಗ ಆ ಆದೇಶವನ್ನು ವಾಪಸ್ ಪಡೆಯಲಾಗಿದ್ದು, ಶಶಿಕಾಂತ ಬಿಜವಾಡ ಜಗದೀಶ್‌ ಶೆಟ್ಟರ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಒಟ್ಟಿನಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದವರೇ ಅಧಿಕಾರಕ್ಕಾಗಿ ಆಹ್ವಾನ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Edited By : Manjunath H D
Kshetra Samachara

Kshetra Samachara

13/09/2021 01:26 pm

Cinque Terre

30.78 K

Cinque Terre

22

ಸಂಬಂಧಿತ ಸುದ್ದಿ