ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶ್ರೀಕಾಂತ ಜಮನಾಳ ನಮ್ಮ ಪಕ್ಷದಲ್ಲಿ ಆ್ಯಕ್ಟಿವ್ ಆಗಿಲ್ಲ: ಹುಣಸಿಮರದ

ಧಾರವಾಡ: ಜೆಡಿಎಸ್ ಮುಖಂಡ ಹಾಗೂ ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಂಧಿತರಾಗಿರುವ ಸಂಬಂಧ ಹುಬ್ಬಳ್ಳಿ, ಧಾರವಾಡ ಮಹಾನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಕಾಂತ ಜಮನಾಳ ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿಲ್ಲ. ವಿಧಾನಸಭೆ ಚುನಾವಣೆ ಮುಗಿದ ಬಳಿಕ ನಮ್ಮ ಪಕ್ಷದ ಚಟುವಟಿಕೆಯಲ್ಲಿ ಅವರು ತೊಡಗಿಕೊಂಡಿಲ್ಲ. ಪಾಲಿಕೆ ಚುನಾವಣೆ ವೇಳೆಯೂ ಜಮನಾಳ ಪಕ್ಷದಲ್ಲಿ ಸಕ್ರಿಯರಾಗಿರಲಿಲ್ಲ ಎಂದಿದ್ದಾರೆ.

ಮೊನ್ನೆ ನಡೆದ ಘಟನೆ ಸಂಬಂಧ ನಮ್ಮ ಪಕ್ಷದ ವರಿಷ್ಠರಿಗೆ ಪತ್ರ ಬರೆಯಲಾಗಿದೆ. ಜಮನಾಳ ಅವರ ವಿಷಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದು, ಅವರು ಯಾವ ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಗುರುರಾಜ ಹುಣಸಿಮರದ ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

13/09/2021 03:36 pm

Cinque Terre

37.62 K

Cinque Terre

0

ಸಂಬಂಧಿತ ಸುದ್ದಿ