ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಿಂದಿ ದಿನ ಆಚರಣೆಗೆ ಜಯ ಕರ್ನಾಟಕ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಹಿಂದಿ ದಿನ ಆಚರಣೆ ದಿನದಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಒತ್ತಾಯ ಪೂರ್ವಕವಾಗಿ ಹಿಂದಿ ದಿನ ಆಚರಣೆ ಜಾರಿಗೆ ತರುವುದು ಸರಿಯಲ್ಲ. ಕೂಡಲೇ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಕೆ ಅನುಷ್ಠಾನಕ್ಕೆ ತರಬೇಕು. ಪ್ರಸ್ತುತ ಹಿಂದಿ ದಿನ ಆಚರಣೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.
Kshetra Samachara
14/09/2021 01:10 pm