ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಹಿಂದಿ ದಿವಸ್ ದಿನಾಚರಣೆಯನ್ನು ವಿರೋಧಿಸುತ್ತಿರುವ ಕನ್ನಡಪರ ಸಂಘಟನೆಗಳು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಂಭಾಗದಲ್ಲಿ ರಾಷ್ಟ್ರೀಯ ಹಿಂದಿ ದಿವಸ್ ದಿನಾಚರಣೆಯ ಶುಭಾಷಯ ಕೋರಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಸೇರಿದಂತೆ ಅನೇಕರ ಭಾವಚಿತ್ರಗಳನ್ನೊಳಗೊಂಡ ಬ್ಯಾನರ್ ಹಾಕಲಾಗಿತ್ತು. ಇದನ್ನು ಕಂಡ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಆ ಇಡೀ ಬ್ಯಾನರ್‌ಗೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೇ ಹಿಂದಿ ದಿವಸ್ ದಿನಾಚರಣೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
Kshetra Samachara
14/09/2021 05:01 pm