ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಸರ್ಕಾರ ಕೊಟ್ಟ ಮಾತನ್ನು ನೆನಪಿಸೋಣ ಹಕ್ಕೋತ್ತಾಯದ ಮೀಸಲಾತಿ ಪಡೆಯೋಣ

ಕುಂದಗೋಳ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಆರು ತಿಂಗಳು ಗಡುವು ಪಡೆದಿದ್ದ ಅಂದಿನ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪನವರ ಹೇಳಿದ ಅವಧಿ ನಾಳೆ ಸಪ್ಟೇಂಬರ್ 15 ಕ್ಕೆ ಕೊನೆಗೊಳ್ಳಲಿದ್ದರೂ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಮಾರ್ಗಸೂಚಿ ಪ್ರಕಟಿಸಿಲ್ಲ. ಈ ಬಗ್ಗೆ ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಕುಂದಗೋಳ ತಾಲೂಕಿನ ಪಂಚಮಸಾಲಿ ಸಮಾಜದವರು ಆಗ್ರಹಿಸಿದರು.

ಸರ್ಕಾರ ಕೊಟ್ಟ ಮಾತನ್ನು ನೆನಪಿಸೋಣ ಎಂದು ಇಂದು ತಹಶೀಲ್ದಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ ಪಂಚಮಸಾಲಿ ಸಮಾಜದವರು ತಹಶೀಲ್ದಾರ ಅಶೋಕ್ ಶಿಗ್ಗಾಂವಿಯವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಸಿದರು.

ಈ ಬಾರಿಯೂ ಮೀಸಲಾತಿ ಕಲ್ಪಿಸದಿದ್ದಲ್ಲಿ ಅಕ್ಟೋಬರ್ 1 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪುನಃ ಹೋರಾಟ ಮುಂದುವರೆಸುವ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದರು.

Edited By : Manjunath H D
Kshetra Samachara

Kshetra Samachara

14/09/2021 05:46 pm

Cinque Terre

36.21 K

Cinque Terre

1

ಸಂಬಂಧಿತ ಸುದ್ದಿ