ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೇಯರ್, ಉಪಮೇಯರ್ ಆಯ್ಕೆ ಕಚೇರಿಯ ಆಚೆ: ವಿರೋಧ ವ್ಯಕ್ತಪಡಿಸಿದ ಪಾಲಿಕೆ ಚುನಾಯಿತ ಸದಸ್ಯರು

ಹುಬ್ಬಳ್ಳಿ: ಸ್ಥಳದ ಅಭಾವದಿಂದ ಹಾಗೂ ಸರಿಯಾದ ಆಸನದ ವ್ಯವಸ್ಥೆ ಇಲ್ಲದಿರುವುದರಿಂದ ಈ ಬಾರಿ ಮಹಾನಗರ ಪಾಲಿಕೆಯ ನೂತನ ಮೇಯರ್‌, ಡೆಪ್ಯುಟಿ ಮೇಯರ್‌ ಆಯ್ಕೆ ಪ್ರಕ್ರಿಯೆ ಪಾಲಿಕೆ ಕಚೇರಿ ಆವರಣದ ಆಚೆ ನಡೆಯುವುದು ಪಕ್ಕಾ ಆಗಿದೆ. ಆದರೆ ಚುನಾಯಿತ ಪ್ರತಿನಿಧಿಗಳು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಹೌದು.. ಸಾಂಸ್ಕೃತಿಕ ಭವನ, ಕನ್ನಡ ಭವನ ತಾತ್ಕಾಲಿಕ ಬಳಕೆಗೆ ಚರ್ಚೆ ನಡೆಸಲಾಗಿದ್ದು, ವಾರ್ಡ್ ಮರುವಿಂಗಡಣೆ ಬಳಿಕ ವಾರ್ಡ್ ಗಳ ಸಂಖ್ಯೆ 67 ರಿಂದ 82ಕ್ಕೆ ಹೆಚ್ಚಳವಾಗಿದ್ದರಿಂದ ಇಷ್ಟೊಂದು ಸಂಖ್ಯೆಯ ಕಾರ್ಪೋರೇಟರ್ ಗಳು, ನಾಲ್ವರು ಶಾಸಕರು, ಒಬ್ಬ ಎಂಎಲ್‌ಸಿ, ಸಂಸದರು ಹಾಗೂ ಹಲವಾರು ಅಧಿಕಾರಿಗಳು ಮತ್ತು ಮಾಧ್ಯಮದವರು ಸೇರಿದಂತೆ ನೂರಾರು ಜನರಿಗೆ ಪಾಲಿಕೆಯ ಸಭಾಭವನದಲ್ಲಿ ಆಸನ ವ್ಯವಸ್ಥೆ ಕಲ್ಪಿಸುವುದು ಕಷ್ಟವಾಗುತ್ತದೆ. ಹಾಗಾಗಿ ಪಾಲಿಕೆಯ ಪ್ರಧಾನ ಕಚೇರಿ ಆವರಣದ ಹೊರಗಡೆಯ ವಿಶಾಲವಾದ ಕಟ್ಟಡದಲ್ಲಿ ಸಭೆ ನಡೆಸುವುದು ಅನಿವಾರ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕಾಟನ್ ಮಾರ್ಕೆಟ್ ನಲ್ಲಿರುವ ಸಾಂಸ್ಕೃತಿಕ ಭವನ ಇಲ್ಲವೇ ಅಶೋಕ ನಗರದಲ್ಲಿನ ಕನ್ನಡ ಭವನವನ್ನು ಪಾಲಿಕೆಯ ತಾತ್ಕಾಲಿಕ ಸಾಮಾನ್ಯ ಸಭೆಗೆ ಸಭಾಂಗಣವನ್ನಾಗಿ ಬಳಸಿಕೊಳ್ಳಲು ಅಧಿಕಾರಿಗಳು ಗಂಭೀರವಾಗಿ ಚರ್ಚಿಸಿದ್ದಾರೆ. ಇದರಲ್ಲಿ ಕಾರು, ಬೈಕ್‌ಗಳ ಪಾರ್ಕಿಂಗ್ ವ್ಯವಸ್ಥೆ ಮತ್ತು ಸಾರಿಗೆ ವ್ಯವಸ್ಥೆ ಸುರಕ್ಷತೆ ಸೇರಿದಂತೆ ಎಲ್ಲ ಆಯಾಮಗಳ ಕುರಿತಾಗಿ ಅಧಿಕಾರಿಗಳು ನಡೆಸಿದ ಚರ್ಚೆಯಲ್ಲಿ ಸಾಂಸ್ಕೃತಿಕ ಭವನವೇ ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಈ ಅಭಿಪ್ರಾಯಕ್ಕೆ ಜನ ಪ್ರತಿನಿಧಿಗಳು ಸಹಮತ ವ್ಯಕ್ತಪಡಿಸದಿದ್ದರೆ ಎಲ್ಲ ಲೆಕ್ಕಾಚಾರಗಳು ಬುಡಮೇಲಾಗಲಿವೆ.

ಒಟ್ಟಿನಲ್ಲಿ ಪಾಲಿಕೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇದೆ. ಚುನಾಯಿತ ಪ್ರತಿನಿಧಿಗಳಲ್ಲದ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಬಂದರೂ ಆಸನದ ವ್ಯವಸ್ಥೆ ತಲೆನೋವಾಗಿದೆ.

Edited By : Manjunath H D
Kshetra Samachara

Kshetra Samachara

15/09/2021 03:31 pm

Cinque Terre

35.44 K

Cinque Terre

1

ಸಂಬಂಧಿತ ಸುದ್ದಿ