ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಾಳೆಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ.17ರಿಂದ ಅ. 7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದಲ್ಲಿ ನಾಳೆ ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ ಎಂದರು.
ಇನ್ನೂ ಆರೋಗ್ಯ ತಪಾಸಣೆ, ಅಂಗವಿಕಲರಿಗೆ ಲಸಿಕೆ ನೀಡುವುದೇ ಸೇವೆ ಮತ್ತು ಸಮರ್ಪಣಾ ಅಭಿಯಾನದ ಯೋಜನೆ. ಈ 20 ದಿನಗಳ ಕಾಲ ಬಿಜೆಪಿ ಯುವ ಮೂರ್ಚಾದಿಂದ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಅಲ್ಲದೇ ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು.
Kshetra Samachara
16/09/2021 12:39 pm