ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಿಸುವಂತೆ ಒತ್ತಾಯಿಸಿ ಗ್ರಾ.ಪಂ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.
ಚನ್ನಾಪೂರ ಗ್ರಾಮಕ್ಕೆ ಪಿಡಿಒ ನೇಮಕ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ ಯಾವುದೇ ಅಧಿಕಾರಿಗಳು ಸ್ಪಂಧಿಸದೇ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಹಾಗೂ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜನೆಗೊಳಿಸುವ ಭರವಸೆ ನೀಡಿದ ನಿಟ್ಟಿನಲ್ಲಿ ಇಂದು ಪ್ರತಿಭಟನೆ ಹಿಂಪಡೆಯಲಾಯಿತು.
ಇನ್ನೂ ಗ್ರಾಮದ ಅಭಿವೃದ್ಧಿ ಕುರಿತು ಗ್ರಾಮಸ್ಥರು ಹಾಗೂ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಸರ್ಕಾರ ಗಮನಕ್ಕೆ ತರುವ ಮೂಲಕ ಗೆಲವನ್ನು ಸಾಧಿಸಿ ಪ್ರತಿಭಟನೆ ಹಿಂಪಡೆದಿದ್ದಾರೆ.
Kshetra Samachara
17/09/2021 06:05 pm