ನವಲಗುಂದ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನ ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಚರಣೆ ಮಾಡುವುದಲ್ಲದೇ, ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಹಾಕುವ ಮೂಲಕ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇನ್ನು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚುತ್ತಿರುವ ನಿರುದ್ಯೋಗಳಿಗೆ ಉದ್ಯೋಗ ಸೃಷ್ಟಿ ಮಾಡದ ಹಾಗೂ ತೈಲ ಬೆಲೆ, ಅಡುಗೆ ಅನಿಲ, ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟಿಸಿ, ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದರು.
ಈ ಸಂದರ್ಭದಲ್ಲಿ ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವರ್ಧಮಾನಗೌಡ ಹಿರೇಗೌಡ್ರ, ಪುರಸಭೆ ಅಧ್ಯಕ್ಷ ಮಂಜುನಾಥ್ ಜಾಧವ್, ನವಲಗುಂದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನಾರಾಯಣ ರಂಗರೆಡ್ಡಿ, ಶ್ರೀಶೈಲ ಮೂಲಿಮನಿ, ಚಂದ್ರಣ್ಣ ಅಣ್ಣಿಗೇರಿ ಸೇರಿದಂತೆ ಹಲವು ಕಾರ್ಯಕರ್ತರು ಇದ್ದರು.
Kshetra Samachara
17/09/2021 07:01 pm