ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೈಟ್ ಕರ್ಫ್ಯೂ ಸಡಿಲಿಕೆ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಗೆ ಮಾಜಿ ಸಿಎಂ ಪ್ರತಿಕ್ರಿಯೆ...!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಮಾಣ ತಗ್ಗಿದ್ದರೂ ಕೂಡ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕಡಿಮೆ ಇದೆ. ಆದರೆ ನಿರ್ಧಾರವನ್ನು ರಾಜ್ಯಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ. ನೈಟ್ ಕರ್ಫ್ಯೂ ಇರುವುದು ರಾಜ್ಯ ಸರ್ಕಾರದ ನಿರ್ಧಾರದ ಮೇಲೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಇನ್ನೂ ನೈಟ್ ಕರ್ಫ್ಯೂ ಧಾರವಾಡ ಜಿಲ್ಲೆಗೆ ಮಾತ್ರ ಸಿಮೀತವಾಗಿಲ್ಲ. ಇದರ ಬಗ್ಗೆ ರಾಜ್ಯ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ನೈಟ್ ಕರ್ಫ್ಯೂ ಸಡಿಲಿಕೆಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾದು ನೋಡೋಣ ರಾಜ್ಯದ ಮುಖ್ಯಮಂತ್ರಿ ನೇತೃತ್ವದಲ್ಲಿ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

Edited By : Shivu K
Kshetra Samachara

Kshetra Samachara

18/09/2021 02:26 pm

Cinque Terre

22.3 K

Cinque Terre

0

ಸಂಬಂಧಿತ ಸುದ್ದಿ