ಧಾರವಾಡ: ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸುತ್ತಿರುವುದನ್ನು ವಿರೋಧಿಸಿ ರಾಮ್ ಸೇನಾ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಹೆಸರನಲ್ಲಿ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಕೂಡಲೇ ಸರ್ಕಾರ ದೇವಸ್ಥಾನಗಳನ್ನು ತೆರುವುಗೊಳಿಸುವುದನ್ನು ಕೈ ಬಿಡಬೇಕು. ನಂಜನಗೂಡಿನಲ್ಲಿ ತೆರವುಗೊಳಿಸಲಾದ ದೇವಸ್ಥಾನವನ್ನು ಮರಳಿ ನಿರ್ಮಿಸಿ, ಅಲ್ಲಿನ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದರೂ ಸರ್ಕಾರಗಳು ಅತ್ಯಾಚಾರಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಮ್ ಸೇನಾ ಜಿಲ್ಲಾ ಅಧ್ಯಕ್ಷ ವಿಜಯ ಕದಂ ನೇತೃತ್ವದಲ್ಲಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
20/09/2021 01:06 pm